ಪರೇಶ್ ಮೇಸ್ತಾ ಕೇಸ್ : ಧಗ ಧಗ ಹೊತ್ತಿ ಉರಿಯುತ್ತಿದೆ ಶಿರಸಿ | Oneindia Kannada

 

ಪರೇಶ್ ಮೇಸ್ತಾ ಕೇಸ್ : ಧಗ ಧಗ ಹೊತ್ತಿ ಉರಿಯುತ್ತಿದೆ ಶಿರಸಿ | Oneindia Kannada

 

ಪರೇಶ್ ಮೇಸ್ತಾ ಕೇಸ್ : ಧಗ ಧಗ ಹೊತ್ತಿ ಉರಿಯುತ್ತಿದೆ ಶಿರಸಿ | Oneindia Kannada

 

   

  •  

     

     

 

     
  •  
  •  

 

     
    ಪರೇಶ್ ಮೇಸ್ತಾ ಕೇಸ್ : ಧಗ ಧಗ ಹೊತ್ತಿ ಉರಿಯುತ್ತಿದೆ ಶಿರಸಿ | Oneindia Kannada
     
     
     
     
     
     
    ಪರೇಶ್ ಮೇಸ್ತ ಅನುಮಾನಾಸ್ಪದ ಸಾವಿನ ಪ್ರಕರಣ ಖಂಡಿಸಿ ಇಂದು ಹಿಂದೂ ಸಂಘಟನೆಗಳು ಶಿರಸಿಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡಿದೆ.ಶಿರಸಿಯ ವಿಕಾಸ ಆಶ್ರಮ ಮೈದಾನದ ಮುಂದೆ ಸೇರಿದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಶಾಸಕ ವಿಶ್ವೇಶರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಪ್ರತಿಭಟನೆಗಿಳಿದರು. ಈ ವೇಳೆ ಪ್ರತಿಭಟನಾ ಜಾಥಾ ನಡೆಸಲು ಮುಂದಾದ ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ತಡೆದರು.ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ತಡೆದಾಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಒಂದು ಹಂತದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗುವ ಸೂಚನೆ ದೊರೆತ ಹಿನ್ನಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಜತೆಗೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಹಲವಾರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.ಇದರಿಂದ ಕೆರಳಿದ ಪ್ರತಿಭಟನಾ ನಿರತ ಹಿಂದೂ ಸಂಘಟನೆಯ ಕಾರ್ಯಕರ್ತರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು. ಕಲ್ಲು ತೂರಾಟದಲ್ಲಿ 6ಕ್ಕೂ ಹೆಚ್ಚು ವಾಹನಗಳು ಜಖಂಗೊಂಡಿದ್ದು ಕೆಎಸ್ಆರ್ಟಿಸಿ ಬಸ್ ಗಳ ಮೇಲೂ ಉದ್ರಿಕ್ತ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. Sirsi bundh, called by the Hindu organizations, has turned to violence. The bundh was called on to condemn Paresh Mesta's death. Two people injured and more than 6 vehicles damaged in the violent protest.