ಚಂಪಾ ಸಿದ್ದರಾಮಯ್ಯನವರ ಚಮಚಾ ಎಂದ ಈಶ್ವರಪ್ಪ | Oneindia Kannada

 

ಚಂಪಾ ಸಿದ್ದರಾಮಯ್ಯನವರ ಚಮಚಾ ಎಂದ ಈಶ್ವರಪ್ಪ | Oneindia Kannada

 

ಚಂಪಾ ಸಿದ್ದರಾಮಯ್ಯನವರ ಚಮಚಾ ಎಂದ ಈಶ್ವರಪ್ಪ | Oneindia Kannada

 

   

 •  

   

   

 

     
 •  
 •  

 

   
  ಚಂಪಾ ಸಿದ್ದರಾಮಯ್ಯನವರ ಚಮಚಾ ಎಂದ ಈಶ್ವರಪ್ಪ | Oneindia Kannada
   
   
   
   
   
   
  ಶಿವಮೊಗ್ಗ, ನವೆಂಬರ್ 27 : ಮೈಸೂರಿನಲ್ಲಿ ನಡೆದ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವಿರುದ್ಧ ರಾಜ್ಯ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ. ಪ್ರೊ. ಚಂದ್ರಶೇಖರ ಪಾಟೀಲ (ಚಂಪಾ) ಸಾಹಿತ್ಯ ಸಮ್ಮೇಳನದ ವೇದಿಕೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್ ಈಶ್ವರಪ್ಪ ಆರೋಪಿಸಿದರು.ಶಿವಮೊಗ್ಗದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ದುರ್ಬಳಕೆ ಮಾಡಿಕೊಂಡಿರುವ ಚಂಪಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚಮಚಾ" ಎಂದು ಟೀಕಿಸಿದರು.ಸಾಹಿತಿಗಳ ಕುಲಕ್ಕೆ ಚಂಪಾ ಅಪಮಾನ ಮಾಡಿದ್ದಾರೆ. ಸಮ್ಮೇಳನದ ವೇದಿಕೆಯಲ್ಲಿ ಸಲ್ಲದ ಮಾತುಗಳನ್ನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಪೇಜಾವರ ಸ್ವಾಮೀಜಿ, ಹಿಂದೂ ಧರ್ಮ, ಭಾರತ ಮಾತೆಯ ಬಗ್ಗೆ ಚಂಪಾ ಟೀಕೆ ಮಾಡಿದ್ದಾರೆ. ಜಾತ್ಯಾತೀತ ಪಕ್ಷಗಳಿಗೆ ಬೆಂಬಲ ನೀಡಿ ಎಂದು ಕರೆ ಕೊಟ್ಟಿದ್ದಾರೆ ಎಂದು ಆರೋಪಿಸಿದರು.ಇಂತಹ ಹೇಳಿಕೆ ನೀಡುವ ಮೂಲಕ ಚಂಪಾ ಕಾಂಗ್ರೆಸ್ ಟಿಕೆಟ್ ಪಡೆಯಲು ಪ್ರಯತ್ನ ನಡೆಸಿರುವಂತಿದೆ. ಅದಕ್ಕಾಗಿಯೇ ಅವರು ಹಿಂದೂ ಧರ್ಮವನ್ನು ಟೀಕಿಸಿದ್ದಾರೆ. ಸಮ್ಮೇಳನದ ಅಧ್ಯಕ್ಷರಾಗಲು ಅಯೋಗ್ಯರು ಎಂದು ಕಿಡಿ ಕಾರಿದರು. KS Eshwarappa expressed anger on writer Chandrashekar Patel (Champa). Champa has Siddaramaiah's chamcha, said Eshwarappa in Shivamogga on November 27